2 Samuel 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನು ನಗರದ ಬಾಗಿಲಿಗೆ ಹೋದನು. ರಾಜನು ಬಾಗಿಲಿನ ಬಳಿಯಲ್ಲಿದ್ದಾನೆಂಬ ಸುದ್ದಿಯು ಹರಡಿತು. ಆದ್ದರಿಂದ ಜನರೆಲ್ಲರೂ ರಾಜನನ್ನು ನೋಡಲು ಬಂದರು. ಅಬ್ಷಾಲೋಮನ ಹಿಂಬಾಲಕರಾದ ಇಸ್ರೇಲರೆಲ್ಲ ಮನೆಗಳಿಗೆ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಎದ್ದು ಬಂದು ಊರಬಾಗಿಲಲ್ಲಿ ಕುಳಿತುಕೊಂಡನು. ಇಗೋ, ಅರಸನು ಬಂದು ಊರಬಾಗಿಲಲ್ಲಿ ಕುಳಿತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ನೆರೆದು ಬಂದರು.
Kannada BSI Bible 2016
ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಎದ್ದು ಬಂದು ಊರುಬಾಗಲಲ್ಲಿ ಕೂತುಕೊಂಡನು. ಇಗೋ, ಅರಸನು ಬಂದು ಊರುಬಾಗಲಲ್ಲಿ ಕೂತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ಕೂಡಿಬಂದರು.
Kannada Bible (KNCL) BSI 2016
ಆಗ ಅರಸನು ಎದ್ದು ಬಂದು ಊರುಬಾಗಿಲಲ್ಲಿ ಕುಳಿತುಕೊಂಡನು. “ಇಗೋ, ಅರಸರು ಊರುಬಾಗಿಲಲ್ಲಿ ಕುಳಿತುಕೊಂಡಿದ್ದಾರೆ,” ಎಂಬ ಸುದ್ದಿ ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಬಂದು ಅವನ ಸುತ್ತಲೂ ನೆರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.