2 Samuel 19:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲಿನ ಕುಲಗಳ ಜನರೆಲ್ಲರೂ ತಮ್ಮಲ್ಲೇ ಚರ್ಚಿಸಿದರು. ಅವರು, “ರಾಜನಾದ ದಾವೀದನು ಫಿಲಿಷ್ಟಿಯರಿಂದ ಮತ್ತು ಇತರ ಶತ್ರುಗಳಿಂದ ನಮ್ಮನ್ನು ರಕ್ಷಿಸಿದನು. ಅಬ್ಷಾಲೋಮನಿಂದಾಗಿ ದಾವೀದನು ಓಡಿಹೋಗಬೇಕಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ನಿವಾಸಗಳಿಗೆ ಓಡಿ ಹೋಗಿದ್ದರು. ಇಸ್ರಾಯೇಲರ ಕುಲಗಳ ಎಲ್ಲಾ ಜನರು ತಮ್ಮತಮ್ಮೊಳಗೆ ಜಗಳವಾಡಿ “ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ, ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
Kannada BSI Bible 2016
ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಾಯೆಲ್‍ಕುಲಗಳಲ್ಲೆಲ್ಲಾ ಜನರು ತಮ್ಮ ತಮ್ಮೊಳಗೆ ಜಗಳವಾಡಿ - ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.
Kannada Bible (KNCL) BSI 2016
ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.