2 Samuel 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.
Kannada BSI Bible 2016
ಹಾಗೆಯೇ ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಬಂದರು; ಅವರು ಕೊಳದ ಆಚೆಯಲ್ಲಿಯೂ ಇವರು ಕೊಳದ ಈಚೆಯಲ್ಲಿಯೂ ಕೂತುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ ಇವರು ಕೆರೆಯ ಈಚೆಯಲ್ಲಿಯೂ ಅವರು ಆಚೆಯಲ್ಲಿಯೂ ಕೂತುಕೊಂಡರು.
Kannada Bible (KNCL) BSI 2016
ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.