2 Samuel 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟು ಬಂದರು.
Kannada BSI Bible 2016
ಹಾಗೆ ಯೇ ಸೌಲನ ಮಗನಾದ ಈಷ್ಬೋಶೆತನ ಕಡೆಯವ ರಾದ ಬೆನ್ಯಾವಿಾನ್ಯರಲ್ಲಿ ಹನ್ನೆರಡು ಮಂದಿಯೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟು ಒಬ್ಬರ ತಲೆಯನ್ನು ಒಬ್ಬರು ಹಿಡಿದು ಒಬ್ಬರ ಪಕ್ಕೆಯಲ್ಲಿ ಒಬ್ಬರು ಕತ್ತಿಯನ್ನು ತಿವಿದು ಎಲ್ಲರೂ ಸತ್ತುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನ ಮಗನಾದ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರೂ ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಸಮಸಂಖ್ಯೆಯಾಗಿ ಹೊರಟುಬಂದು
Kannada Bible (KNCL) BSI 2016
ಆಗ ಸೌಲನ ಮಗ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ಮತ್ತು ದಾವೀದನ ಸೇವಕರಲ್ಲಿ ಹನ್ನೆರಡು ಮಂದಿ ಸಮಸಂಖ್ಯೆಯಾಗಿ ಹೊರಟು ದ್ವಂದ್ವಯುದ್ಧ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು,