2 Samuel 2:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಬ್ನೇರನು ಅವನಿಗೆ, “ನನ್ನನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು ಸುಲಿದುಕೋ” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
Kannada BSI Bible 2016
ಅದಕ್ಕವನುನಾನೇ ಅಂದನು. ಆಗ ಅಬ್ನೇರನು ಅವನಿಗೆ--ನೀನು ಬಲಗಡೆಗಾದರೂ ಎಡಗಡೆಗಾದರೂ ತಿರುಗಿ ಯೌವ ನಸ್ಥರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತಕ್ಕೋ ಅಂದನು. ಆದರೆ ಅಸಾಹೇಲನು ಅವನ ಹಿಂದಿನಿಂದ ತಿರುಗಲೊಲ್ಲದೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಬ್ನೇರನು ಅವನಿಗೆ - ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಪ್ರಾಯಸ್ಥರಲ್ಲೊಬ್ಬನನ್ನು ಹಿಡಿದು ಸುಲುಕೋ ಎಂದು ಹೇಳಿದನು; ಆದರೆ ಅಸಾಹೇಲನು ಒಪ್ಪಲಿಲ್ಲ.
Kannada Bible (KNCL) BSI 2016
ಆಗ ಅಬ್ನೇರನು, “ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು, ಸುಲಿದುಕೋ,” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ.