2 Samuel 2:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ನೇರನು ಯೋವಾಬನಿಗೆ, “ನಾವು ಎಂದೆಂದಿಗೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಬ್ನೇರನು, “ಯೋವಾಬನನ್ನು ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ” ಎಂದನು.
Kannada BSI Bible 2016
ಆಗ ಅಬ್ನೇರನು ಯೋವಾಬನಿಗೆ--ಕತ್ತಿಯು ಯಾವಾಗಲೂ ನುಂಗಿಬಿಡುವದೋ? ಅಂತ್ಯ ದಲ್ಲಿ ಅದು ಕಹಿಯಾಗಿರುವದೆಂದು ನಿನಗೆ ಗೊತ್ತಾಗು ವದಿಲ್ಲವೋ? ತಮ್ಮ ಸಹೋದರರನ್ನು ಹಿಂಬಾಲಿಸು ವದನ್ನು ಬಿಟ್ಟು ಹಿಂದಕ್ಕೆ ತಿರುಗುವ ಹಾಗೆ ಜನರಿಗೆ ಎಷ್ಟು ಕಾಲ ಹೇಳದೆ ಇರುವಿ ಎಂದು ಕೂಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಬ್ನೇರನು ಯೋವಾಬನನ್ನು - ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ ಎಂದನು.
Kannada Bible (KNCL) BSI 2016
ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.