2 Samuel 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.
Kannada BSI Bible 2016
ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಜನರೂ ತಮ್ಮತಮ್ಮ ಕುಟುಂಬಗಳನ್ನು ಕರಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು.
Kannada Bible (KNCL) BSI 2016
ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು.