2 Samuel 2:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು, ಹಿಂದಿರುಗಿ ಬಂದು, ಜನರನ್ನು ಸೇರಿಸಿ ಲೆಕ್ಕಮಾಡಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಸೈನಿಕರೂ ಅಸಾಹೇಲನೂ ಇರಲಿಲ್ಲ.
Kannada BSI Bible 2016
ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ ದಾವೀದನ ಸೇವಕ ರಲ್ಲಿ ಹತ್ತೊಂಭತ್ತು ಜನರೂ ಅಸಾಹೇಲನೂ ಕಡಿಮೆ ಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನು ಅಬ್ನೇರನನ್ನು ಹಿಂದಟ್ಟದೆ ಬಿಟ್ಟು ಹಿಂದಿರುಗಿ ಬಂದು ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಭತ್ತು ಮಂದಿ ಭಟರೂ ಅಸಾಹೇಲನೂ ಇರಲಿಲ್ಲ.
Kannada Bible (KNCL) BSI 2016
ಯೋವಾಬನು ಅಬ್ನೇರನನ್ನು ಬೆನ್ನಟ್ಟದೆ ಹಿಂದೆ ತಿರುಗಿ ಬಂದು, ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಯೋಧರು ಮತ್ತು ಅಸಾಹೇಲನು ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ, ದಾವೀದನ ಸೇವಕರಲ್ಲಿ ಹತ್ತೊಂಬತ್ತು ಜನರೂ, ಅಸಾಯೇಲನೂ ಕಡಿಮೆಯಾಗಿದ್ದರು.