2 Samuel 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.
Kannada BSI Bible 2016
ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.
Kannada Bible (KNCL) BSI 2016
ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.