2 Samuel 20:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,
Kannada BSI Bible 2016
ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನನ್ನು ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಮುಂದೆ ನಡೆದಾಗ
Kannada Bible (KNCL) BSI 2016
ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.