2 Samuel 20:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮಾಸನು ರಸ್ತೆಯ ಮಧ್ಯದಲ್ಲಿ ತನ್ನ ರಕ್ತದಲ್ಲಿಯೇ ಬಿದ್ದಿದ್ದನು. ಅವನ ದೇಹವನ್ನು ನೋಡಲು ಜನರೆಲ್ಲರೂ ನಿಲ್ಲುತ್ತಿದ್ದರು. ಆದ್ದರಿಂದ ಆ ಯುವಕನು ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿ ಹೊಲದಲ್ಲಿಟ್ಟನು. ನಂತರ ಅವನು ಅಮಾಸನ ದೇಹದ ಮೇಲೆ ಒಂದು ವಸ್ತ್ರವನ್ನು ಹೊದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾರ್ಗದ ಮಧ್ಯದಲ್ಲಿ ರಕ್ತದಲ್ಲಿ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಕಂಡ ಆ ಆಳು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
Kannada BSI Bible 2016
ಆದರೆ ಅಮಾಸನು ರಾಜ ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವದನ್ನು ಆ ಮನುಷ್ಯನು ಕಂಡಾಗ ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರೂ ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವದನ್ನು ಆ ಮನುಷ್ಯನು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು ಹೊಲದಲ್ಲಿ ಹಾಕಿ ಅದನ್ನು ಬಟ್ಟೆಯಿಂದ ಮುಚ್ಚಿದನು.
Kannada Bible (KNCL) BSI 2016
ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಆ ಆಳು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಮಾಸನು ರಾಜಮಾರ್ಗದೊಳಗೆ ರಕ್ತದಲ್ಲಿ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವುದನ್ನು ಆ ಮನುಷ್ಯನು ಕಂಡಾಗ, ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಹಾಕಿ, ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.