2 Samuel 20:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
Kannada BSI Bible 2016
ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.
Kannada Bible (KNCL) BSI 2016
ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.