2 Samuel 20:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಸ್ರೇಲರೆಲ್ಲರೂ ದಾವೀದನನ್ನು ತೊರೆದು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದದ ಜನರೆಲ್ಲರೂ ಜೋರ್ಡನ್ ನದಿಯಿಂದ ಜೆರುಸಲೇಮಿನ ತನಕ ತಮ್ಮ ರಾಜನ ಜೊತೆಯಲ್ಲಿಯೇ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು, ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್ ತಗ್ಗಿನಿಂದ ಯೆರೂಸಲೇಮಿನ ವರೆಗೂ ಅವನ ಜೊತೆಯಲ್ಲಿ ಹೋದರು.
Kannada BSI Bible 2016
ಇಸ್ರಾಯೇಲ್ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಇಸ್ರಾಯೇಲ್ಯರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಯೊರ್ದನ್‍ತಗ್ಗಿನಿಂದ ಯೆರೂಸಲೇವಿುನವರೆಗೂ ಅವನ ಜೊತೆಯಲ್ಲಿ ಹೋದರು.
Kannada Bible (KNCL) BSI 2016
ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.