2 Samuel 20:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,
Kannada BSI Bible 2016
ಕಾರ್ಯವು ಹಾಗಲ್ಲ; ಬಿಕ್ರೀಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯಾಮ್‌ ಬೆಟ್ಟದವನಾದ ಒಬ್ಬ ಮನುಷ್ಯನು ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ; ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು ಅಂದನು. ಆ ಸ್ತ್ರೀಯು ಯೋವಾಬನಿಗೆ--ಇಗೋ, ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಬಳಿಗೆ ಹಾಕಲ್ಪಡುವದು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಗತಿಯು ಹೀಗಿರುವದಿಲ್ಲ; ಎಫ್ರಾಯೀಮ್ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನೇ ಒಪ್ಪಿಸಿರಿ; ನಾನು ಊರನ್ನು ಬಿಟ್ಟುಹೋಗುತ್ತೇನೆ ಎಂದು ಹೇಳಿದನು. ಅದಕ್ಕೆ ಸ್ತ್ರೀಯು - ನೋಡು, ಈಗಲೇ ಅವನ ತಲೆಯು ಗೋಡೆಯಕಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವದು ಎಂದು ಉತ್ತರಕೊಟ್ಟು
Kannada Bible (KNCL) BSI 2016
ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.