2 Samuel 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಅಬೀಷೈಯನಿಗೆ, “ಬಿಕ್ರೀಯ ಮಗನಾದ ಶೆಬನು ಅಬ್ಷಾಲೋಮನಿಗಿಂತ ನಮಗೆ ಹೆಚ್ಚು ಅಪಾಯಕಾರಿಯಾಗಿದ್ದಾನೆ. ಆದ್ದರಿಂದ ನನ್ನ ಸೇವಕರನ್ನು ಕರೆದುಕೊಂಡು, ಶೆಬನನ್ನು ಅಟ್ಟಿಸಿಕೊಂಡು ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಳ್ಳುವುದಕ್ಕಿಂತ ಮುಂಚೆಯೇ ತ್ವರಿತವಾಗಿ ಹೋಗು. ಶೆಬನು ಕೋಟೆಗಳಿರುವ ನಗರಗಳಲ್ಲಿ ಸೇರಿಕೊಂಡರೆ, ಅವನು ನಮ್ಮಿಂದ ತಪ್ಪಿಸಿಕೊಂಡು ಬಿಡುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.
Kannada BSI Bible 2016
ಆದದರಿಂದ ದಾವೀದನು ಅಬೀಷೈಗೆಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಸ್ಥಳಗಳಾದ ಪಟ್ಟಣಗಳನ್ನು ಸಂಪಾ ದಿಸಿಕೊಂಡು ನಮ್ಮಿಂದ ತಪ್ಪಿಸಿಕೊಳ್ಳದ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತಕ್ಕೊಂಡು ಹೊರಟು ಅವನನ್ನು ಹಿಂದಟ್ಟು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.
Kannada Bible (KNCL) BSI 2016
ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.