2 Samuel 20:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅಮಾಸನನ್ನು, “ಸೋದರನೇ, ನೀವೆಲ್ಲ ಕ್ಷೇಮವೇ?” ಎಂದು ಕೇಳಿದನು. ಯೋವಾಬನು ಅಮಾಸನಿಗೆ ಮುದ್ದಿಡಲು ಅವನ ಗಡ್ಡವನ್ನು ಬಲಗೈಯಲ್ಲಿ ಹಿಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
Kannada BSI Bible 2016
ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಮಾಸನನ್ನು - ಸಹೋದರನೇ, ಕ್ಷೇಮವೋ ಎಂದು ಕೇಳಿ ಮುದ್ದಿಡುವದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು
Kannada Bible (KNCL) BSI 2016
ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.