2 Samuel 21:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
Kannada BSI Bible 2016
ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.