2 Samuel 21:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
Kannada BSI Bible 2016
ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತಕ್ಕೊಂಡುಹೋಗಿ ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಸುಗ್ಗಿಯ ದಿವಸ ಮೊದಲುಗೊಂಡು ಆಕಾಶದಿಂದ ಅವರ ಮೇಲೆ ಮಳೆ ಸುರಿಯುವ ವರೆಗೂ ಹಗಲಲ್ಲಿ ಆಕಾಶದ ಪಕ್ಷಿಗಳೂ ರಾತ್ರಿಯಲ್ಲಿ ಅಡವಿಯ ಮೃಗಗಳೂ ಅದರ ಮೇಲೆ ಕೂತುಕೊಳ್ಳದಂತೆ ಕಾಯುತ್ತಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯು ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕೂತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳೂ ಇರುಳಿನಲ್ಲಿ ಕಾಡುಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.
Kannada Bible (KNCL) BSI 2016
ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.