2 Samuel 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ದಾವೀದನು ಸೌಲನ ಮತ್ತು ಯೋನಾತಾನನ ಮೂಳೆಗಳನ್ನು ತರುವುದಕ್ಕೋಸ್ಕರ ಯಾಬೇಷ್‌ಗಿಲ್ಯಾದಿಗೆ ಹೋದನು. ಸೌಲ ಮತ್ತು ಯೋನಾತಾನರನ್ನು ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವರ ಶವಗಳನ್ನು ಬೇತ್‌ಷೆಯಾನಿನ ಬೀದಿಯಲ್ಲಿ ತೂಗುಹಾಕಿದ್ದರು. ಯಾಬೇಷ್‌ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೋಸ್ಕರ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ನೇತುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
Kannada BSI Bible 2016
ಆಗ ದಾವೀದನು ಹೋಗಿ ಫಿಲಿಷ್ಟಿಯರು ಗಿಲ್ಬೋ ವದಲ್ಲಿ ಸೌಲನನ್ನು ಹೊಡೆದಾಗ ಬೆತ್ಸಾನಿನ ಬೀದಿ ಯಲ್ಲಿ ತೂಗು ಹಾಕಿದ ಗಿಲ್ಯಾದಿನ ಯಾಬೇಷ್‌ ಪಟ್ಟಣದವರು ಅಲ್ಲಿ ಹೋಗಿ ಕದ್ದು ಒಯ್ದ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವದಕ್ಕೋಸ್ಕರ ಯಾಬೇಷ್‍ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ಷೆಯಾನಿನ ಬೀದಿಗಳಲ್ಲಿ ತೂಗಹಾಕಿದ್ದರು. ಯಾಬೇಷ್‍ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
Kannada Bible (KNCL) BSI 2016
ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.