2 Samuel 21:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲ ಮತ್ತು ಅವನ ಮಗನಾದ ಯೋನಾತಾನರ ಮೂಳೆಗಳನ್ನು ಅವರು ಬೆನ್ಯಾಮೀನಿನ ಪ್ರದೇಶದಲ್ಲಿ ಸಮಾಧಿ ಮಾಡಿದರು. ಸೌಲನ ತಂದೆಯಾದ ಕೀಷನ ಸ್ಮಶಾನದಲ್ಲಿ ಈ ದೇಹಗಳನ್ನು ಜನರು ಸಮಾಧಿ ಮಾಡಿದರು. ರಾಜನು ಆಜ್ಞಾಪಿಸಿದ್ದನ್ನೆಲ್ಲ ಜನರು ಮಾಡಿದರು. ನಂತರ ಆ ದೇಶದ ಜನರ ಪ್ರಾರ್ಥನೆಯನ್ನು ದೇವರು ಆಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅ ಎಲಬುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದ ನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತವಾಗಿ, ಅವನು ಅವರ ಪ್ರಾರ್ಥನೆಗಳಿಗೆ ಉತ್ತರಕೊಟ್ಟನು.
Kannada BSI Bible 2016
ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.
Kannada Bible (KNCL) BSI 2016
ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.