2 Samuel 21:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರು ದಾವೀದನೊಡನೆ ಮತ್ತೆ ಯುದ್ಧವನ್ನು ಮಾಡಿದರು. ದಾವೀದನು ತನ್ನ ಜನರೊಂದಿಗೆ ಫಿಲಿಷ್ಟಿಯರ ವಿರುದ್ಧ ಹೋರಾಡಲು ಹೋದನು. ಆದರೆ ದಾವೀದನು ಆಯಾಸಗೊಂಡು ಬಲಹೀನನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಪುನಃ ಯುದ್ಧವಾಯಿತು. ದಾವೀದನು ತನ್ನ ಸೇವಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
Kannada BSI Bible 2016
ಫಿಲಿಷ್ಟಿಯರು ತಿರಿಗಿ ಇಸ್ರಾಯೇಲ್ಯರ ಮೇಲೆ ಯುದ್ಧಮಾಡಿದರು. ಆಗ ದಾವೀದನೂ ಅವನ ಸಂಗಡ ಇದ್ದ ಅವನ ಸೇವಕರೂ ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧಮಾಡಿದರು; ಆದರೆ ದಾವೀದನು ದಣಿದು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಾಯೇಲ್ಯರಿಗೂ ತಿರಿಗಿ ಯುದ್ಧವಾಯಿತು. ದಾವೀದನು ತನ್ನ ಸೈನಿಕರನ್ನು ಕರಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಂಥ ಅವನನ್ನು
Kannada Bible (KNCL) BSI 2016
ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು.