2 Samuel 21:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಚೆರೂಯಳ ಮಗನಾದ ಅಬೀಷೈ ಆ ಫಿಲಿಷ್ಟಿಯನನ್ನು ಕೊಂದು ದಾವೀದನನ್ನು ರಕ್ಷಿಸಿದನು. ಆಗ ದಾವೀದನ ಜನರು ಅವನಿಂದ ವಿಶೇಷ ಪ್ರಮಾಣವನ್ನು ಮಾಡಿಸಿದರು. ಅವರು ಅವನಿಗೆ, “ನೀನು ನಮ್ಮೊಂದಿಗೆ ಇನ್ನು ಮೇಲೆ ಯುದ್ಧಕ್ಕೆ ಬರಬಾರದು. ನೀನು ಯುದ್ಧಕ್ಕೆ ಹೋಗಿ ಕೊಲ್ಲಲ್ಪಟ್ಟರೆ, ಇಸ್ರೇಲಿನ ಅತ್ಯಂತ ಮಹಾಪುರುಷನನ್ನು ಕಳೆದುಕೊಂಡಂತಾಗುತ್ತದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು, ಆ ಫಿಲಿಷ್ಟಿಯನನ್ನು ಕೊಂದು ಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಾಯೇಲರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು” ಎಂದು ಖಂಡಿತವಾಗಿ ಹೇಳಿದನು.
Kannada BSI Bible 2016
ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ - ಇಸ್ರಾಯೇಲ್ಯರ ದೀಪವು ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು ಎಂದು ಖಂಡಿತವಾಗಿ ಹೇಳಿದರು.
Kannada Bible (KNCL) BSI 2016
ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.