2 Samuel 21:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಗೋಬ್ ಎಂಬ ಸ್ಥಳದಲ್ಲಿ ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಆರಂಭವಾಯಿತು. ಯಾರೇಯೋರೆಗೀವ್ ಎಂಬವನು ಬೆನ್ಯಾಮೀನ್ ಕುಲದವನೂ ಬೆತ್ಲೆಹೇಮಿನವನೂ ಆಗಿದ್ದನು. ಇವನ ಮಗನಾದ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಭರ್ಜಿಯು ನೇಕಾರನ ಕುಂಟೆಯಷ್ಟು ಗಾತ್ರವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇಮಿನವನಾದ ಯಾರೇಯೋರೆಗೀಮ್ ಎಂಬುವವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು.
Kannada BSI Bible 2016
ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ಉಂಟಾದಾಗ ಬೇತ್ಲೆಹೇಮಿನವನಾದ ಯಾರೇಯೋರೆ ಗೀಮ್ ಎಂಬವನ ಮಗನಾಗಿರುವ ಎಲ್ಹಾನಾನನು ಗಿತ್ತಿಯನಾದ ಗೊಲ್ಯಾತನ ಸಹೋದರನನ್ನು ಕೊಂದನು. ಈ ಗೊಲ್ಯಾತನ ಈಟಿಯ ಕಟ್ಟಿಗೆಯು ನೆಯ್ಯುವವರ ದೋಣೀ ಮರಕ್ಕೆ ಸಮಾನವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೇತ್ಲೆಹೇವಿುನವನಾದ ಯಾರೇ ಯೋರೆಗೀಮ್ ಎಂಬವನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಿತ್ತು.
Kannada Bible (KNCL) BSI 2016
ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೆತ್ಲೆಹೇಮಿನವನಾದ ಯಾರೇಯೋ ರೆಗೀಮ್ ಎಂಬವನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಭರ್ಜಿಯ ಹಿಡಿಕೆ ನೇಯಿಗಾರರ ಕುಂಟೆಯಷ್ಟು ಗಾತ್ರ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.