2 Samuel 21:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಈ ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
Kannada BSI Bible 2016
ಗತ್‌ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.
Kannada Bible (KNCL) BSI 2016
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.