2 Samuel 21:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
Kannada BSI Bible 2016
ಆದದರಿಂದ ದಾವೀದನು ಗಿಬ್ಯೋನ್ಯರಿಗೆ--ನಾನು ನಿಮಗೆ ಮಾಡ ಬೇಕಾದದ್ದೇನು? ನೀವು ಕರ್ತನ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ ನಾನು ಯಾವದರಿಂದ ಪ್ರಾಯಶ್ಚಿತ್ತ ಮಾಡಲಿ ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು.
Kannada Bible (KNCL) BSI 2016
ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.