2 Samuel 21:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು.
Kannada BSI Bible 2016
ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು.
Kannada Bible (KNCL) BSI 2016
ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.