2 Samuel 21:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಯೋನಾತಾನನ ಮಗನಾದ ಮೆಫೀಬೋಶೆತನನ್ನು ರಾಜನು ರಕ್ಷಿಸಿದನು. (ಯೋನಾತಾನನು ಸೌಲನ ಮಗ.) ದಾವೀದನು ಯೆಹೋವನ ಹೆಸರಿನಲ್ಲಿ ಯೋನಾತಾನನಿಗೆ ವಾಗ್ದಾನ ಮಾಡಿದ್ದನು. ಆದ್ದರಿಂದ ಮೆಫೀಬೋಶೆತನಿಗೆ ಅವರಿಂದ ತೊಂದರೆಯಾಗದಂತೆ ನೋಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಪುಮಾಡಿಕೊಂಡು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
Kannada BSI Bible 2016
ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಸಿ ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
Kannada Bible (KNCL) BSI 2016
ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,