2 Samuel 21:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿಬ್ಯೋನ್ಯರು ಈ ಏಳು ಮಂದಿ ಗಂಡುಮಕ್ಕಳನ್ನು ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿ ಒಟ್ಟಿಗೆ ಸತ್ತರು. ಅವರನ್ನು ಸುಗ್ಗಿಯ ಆರಂಭದ ದಿನಗಳಲ್ಲಿ ಕೊಲ್ಲಲಾಯಿತು. (ಬಾರ್ಲಿಯ ಸುಗ್ಗಿಯು ಆಗ ತಾನೇ ಆರಂಭವಾಗಿತ್ತು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇವರನ್ನು ಕೊಂದು, ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕ ಕಾಲದಲ್ಲಿ ಸತ್ತುಹೋದರು. ಇವರನ್ನು ಕೊಂದಾಗ ಜವೆಗೋದಿಯ ಸುಗ್ಗಿ ಆರಂಭವಾಗಿತ್ತು
Kannada BSI Bible 2016
ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇವರನ್ನು ಕೊಂದು ಗುಡ್ಡದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕಿದರು. ಈ ಏಳು ಮಂದಿಯೂ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭವಾಗಿತ್ತು.
Kannada Bible (KNCL) BSI 2016
ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.