2 Samuel 22:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
Kannada BSI Bible 2016
ಕರ್ತನು ದಾವೀದನನ್ನು ಅವನ ಎಲ್ಲಾ ಶತ್ರುಗಳ ಕೈಯೊಳಗಿಂದಲೂ ಸೌಲನ ಕೈಯೊಳಗಿಂದಲೂ ಬಿಡಿಸಿದ ದಿವಸದಲ್ಲಿ ಅವನು ಕರ್ತನನ್ನು ಕುರಿತು ಈ ಹಾಡಿನ ಮಾತುಗಳನ್ನು ಹೇಳಿದನು. ಏನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -
Kannada Bible (KNCL) BSI 2016
ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.