2 Samuel 22:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಕಾರ್ಮೋಡಗಳನ್ನೇ ತನ್ನ ಸುತ್ತಲೂ ಗುಡಾರದಂತಾಗಿಸಿಕೊಂಡನು. ಆತನು ಆಕಾಶದ ನೀರನ್ನು, ಗುಡುಗುವ ದೊಡ್ಡ ಮೋಡಗಳನ್ನು ತನ್ನ ಸುತ್ತಲೂ ಕವಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.
Kannada BSI Bible 2016
ಕತ್ತಲನ್ನೂ ಕತ್ತಲಾದ ನೀರುಗಳನ್ನೂ ಆಕಾಶದ ಕಾರ್ಮೋಡಗಳನ್ನೂ ತನ್ನ ಸುತ್ತಲೂ ಡೇರೆ ಗಳಾಗಿ ಮಾಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕತ್ತಲನ್ನೂ ಜಲಮಯವಾಗಿರುವ ನೀಲಮೇಘಗಳನ್ನೂ ತನ್ನ ಸುತ್ತಲು ಗುಡಾರದಂತೆ ಕವಿಸಿಕೊಂಡನು.
Kannada Bible (KNCL) BSI 2016
ಕತ್ತಲನು, ಜಲಮಯ ಮೇಘಗಳನು ಸುತ್ತಲು ಕವಿಸಿಕೊಂಡನು ಛತ್ರಾಂಬರದೊಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು.