2 Samuel 22:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನು ಮೇಲಿನ ಲೋಕದಿಂದ ಕೆಳಗಿಳಿದನು. ಆತನು ನನ್ನನ್ನು ಹಿಡಿದುಕೊಂಡು ನನ್ನನ್ನು ನೀರಿನಡಿಯಿಂದ ಮೇಲಕ್ಕೆತ್ತಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.
Kannada BSI Bible 2016
ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ವಿಸ್ತಾರವಾದ ನೀರುಗಳೊಳಗಿಂದ ನನ್ನನ್ನು ಎಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಮೇಲಣ ಲೋಕದಿಂದ ಕೈಚಾಚಿ ನನ್ನನ್ನು ಹಿಡಿದು ಮಹಾಜಲರಾಶಿಗಳೊಳಗಿಂದ ಎಳೆದನು.
Kannada Bible (KNCL) BSI 2016
ಮೇಲಣಾಲೋಕದಿಂದ ಹಿಡಿದುಕೊಂಡ ಎನ್ನನು ಕೈಚಾಚಿ ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.