2 Samuel 22:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶತ್ರುಗಳು ನನಗೆ ಮುತ್ತಿಗೆ ಹಾಕಿದಾಗ ನಾನು ತೊಂದರೆಯಲ್ಲಿದ್ದೆನು. ಆದರೆ ನನಗೆ ಯೆಹೋವನು ಸಹಾಯ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
Kannada BSI Bible 2016
ಅವರು ನನಗಿಂತ ಬಲಿಷ್ಠ ರಾಗಿದ್ದರು. ನನ್ನ ಆಪತ್ತಿನ ದಿವಸದಲ್ಲಿ ನನಗೆ ಅಡ್ಡಿ ಯಾಗಿದ್ದರು; ಆದರೆ ಕರ್ತನು ನನಗೆ ಆಧಾರ ವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು; ಆಗ ಯೆಹೋವನು ನನಗೆ ಉದ್ಧಾರಕನಾದನು.
Kannada Bible (KNCL) BSI 2016
ನನ್ನ ಮೇಲೆರಗಿದ್ದರಾ ಹಗೆಗಳು ದುರಂತ ಕಾಲದಲಿ ನನಗುದ್ಧಾರಕನಾದ ಸರ್ವೇಶ್ವರನು, ಆ ವಿಪತ್ಕಾಲದಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.