2 Samuel 22:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನೀತಿಗನುಸಾರವಾಗಿ ನಡೆದುಕೊಂಡಿದ್ದರಿಂದ ಯೆಹೋವನು ನನಗೆ ಪ್ರತಿಫಲವನ್ನು ಕೊಟ್ಟನು. ನಾನು ನಿರ್ದೋಷಿಯಾಗಿದ್ದರಿಂದ ಆತನು ನನಗೆ ಒಳ್ಳೆಯದನ್ನೇ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
Kannada BSI Bible 2016
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲುಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
Kannada Bible (KNCL) BSI 2016
ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕ ಹಾಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.