2 Samuel 22:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಒಳ್ಳೆಯದನ್ನೇ ಮಾಡಿದೆನು. ಯೆಹೋವನ ದೃಷ್ಟಿಯಲ್ಲಿ ನಾನು ತಪ್ಪೇನೂ ಮಾಡಲಿಲ್ಲ, ಆದ್ದರಿಂದ ಆತನು ನನಗೆ ಪ್ರತಿಫಲ ಕೊಡುವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
Kannada BSI Bible 2016
ಆದದರಿಂದ ಕರ್ತನು ನನ್ನ ನೀತಿಯ ಪ್ರಕಾರವಾಗಿಯೂ ಆತನ ಕಣ್ಣುಗಳ ಮುಂದಿನ ನನ್ನ ಶುದ್ಧತ್ವದ ಪ್ರಕಾರವಾಗಿಯೂ ನನಗೆ ಬದಲುಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.
Kannada Bible (KNCL) BSI 2016
ನಾ ನೀತಿವಂತ, ನಿರಪರಾಧಿಯೆಂದರಿತು ನನಗಿತ್ತನಾ ಸರ್ವೇಶ್ವರ ತಕ್ಕ ಪ್ರತಿಫಲವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.