2 Samuel 22:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಹಾಯಕ್ಕಾಗಿ ದೇವರ ಬಳಿಗೆ ಓಡಿಹೋಗುತ್ತೇನೆ. ಆತನೇ ನನ್ನ ಆಶ್ರಯಗಿರಿ. ಯೆಹೋವನು ನನ್ನ ಗುರಾಣಿ. ಆತನ ಶಕ್ತಿಯು ನನ್ನನ್ನು ರಕ್ಷಿಸುತ್ತದೆ. ಆತನು ನಾನು ಅಡಗಿಕೊಳ್ಳುವ ಸ್ಥಳ; ಬೆಟ್ಟಗಳ ಮೇಲಿರುವ ನನ್ನ ಸುರಕ್ಷಿತ ಸ್ಥಳ; ಆತನು ನನ್ನನ್ನು ಕ್ರೂರ ಶತ್ರುಗಳಿಂದ ರಕ್ಷಿಸುವನು!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
Kannada BSI Bible 2016
ನನ್ನ ಬಂಡೆಯಾದ ದೇವರಲ್ಲಿ ನಾನು ಭರವಸ ವಿಡುವೆನು; ಆತನು ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ಉನ್ನತ ಗೋಪುರವೂ ನನ್ನ ಆಶ್ರಯವೂ ನನ್ನ ರಕ್ಷಕನೂ ಆಗಿದ್ದಾನೆ. ನೀನು ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ದುರ್ಗವೂ ನನ್ನ ಶರಣನೂ ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
Kannada Bible (KNCL) BSI 2016
ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.