2 Samuel 22:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಶತ್ರುಗಳನ್ನು ನಾಶಗೊಳಿಸಿದೆನು! ನಾನು ಅವರನ್ನು ಸಂಪೂರ್ಣವಾಗಿ ನಾಶಗೊಳಿಸಿದೆನು. ಅವರು ಮತ್ತೆ ಮೇಲೇಳುವುದಿಲ್ಲ. ಹೌದು, ನನ್ನ ಶತ್ರುಗಳು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.
Kannada BSI Bible 2016
ಅವರನ್ನು ಸಂಹರಿಸಿಬಿಟ್ಟೆನು. ಗಾಯಮಾಡಿ ದೆನು. ಆದದರಿಂದ ಅವರು ಏಳದೆ ಹೋಗಿ, ನನ್ನ ಪಾದಗಳ ಕೆಳಗೆ ಬಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು; ಅವರು ನನ್ನ ಪಾದದ ಕೆಳಗೆ ಬೀಳುವರು.
Kannada Bible (KNCL) BSI 2016
ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.