2 Samuel 22:42 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
Kannada BSI Bible 2016
ಅವರು ನೋಡುತ್ತಿದ್ದರು, ಆದರೆ ರಕ್ಷಿಸು ವವನು ಯಾರು ಇರಲಿಲ್ಲ; ಕರ್ತನನ್ನು ನೋಡಿದರು, ಆದರೆ ಆತನು ಅವರಿಗೆ ಪ್ರತ್ಯುತ್ತರ ಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಸುತ್ತಲೂ ನೋಡಿದರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
Kannada Bible (KNCL) BSI 2016
ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ ಸರ್ವೇಶ್ವರನಿಗೆ ಮೊರೆಯಿಟ್ಟರೂ ಅವರಿಗೆ ದೊರಕಲಿಲ್ಲ ಉತ್ತರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.