2 Samuel 22:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ನನ್ನ ವಿರುದ್ಧ ವಾದಿಸಿದಾಗ ನೀನು ನನ್ನನ್ನು ರಕ್ಷಿಸಿದೆ. ನೀನು ನನ್ನನ್ನು ಜನಾಂಗಗಳಿಗೆ ಅಧಿಪತಿಯನ್ನಾಗಿ ಮಾಡಿದೆ. ನಾನು ತಿಳಿಯದ ಜನರೂ ನನ್ನ ಸೇವೆಮಾಡುತ್ತಾರೆ!
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
Kannada BSI Bible 2016
ನೀನು ನನ್ನ ಜನರ ವಾಗ್ವಾದಗಳಿಂದ ನನ್ನನ್ನು ತಪ್ಪಿಸಿದ್ದೀ, ಜನಾಂಗಗಳಿಗೆ ತಲೆಯಾಗಿ ನನ್ನನ್ನು ಇರಿಸಿದ್ದೀ; ನಾನು ಅರಿಯದ ಜನರು ನನ್ನನ್ನು ಸೇವಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದೀ; ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದೀ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
Kannada Bible (KNCL) BSI 2016
ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; ನಾನು ಅರಿಯದ ಜನರು ನನಗೆ ವಿಧೇಯರಾಗುವರು.