2 Samuel 22:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಶತ್ರುಗಳಿಂದ ನನ್ನನ್ನು ಸ್ವತಂತ್ರನಾಗಿಸುವವನು ದೇವರೇ. ಹೌದು, ನೀನು ನನ್ನನ್ನು ನನ್ನ ಶತ್ರುಗಳಿಂದ ತಪ್ಪಿಸಿ ಮೇಲಕ್ಕೇರಿಸುವೆ. ನನ್ನನ್ನು ಹಿಂಸಿಸಬೇಕೆನ್ನುವ ಮನುಷ್ಯನಿಂದ ನೀನು ನನಗೆ ರಕ್ಷಣೆ ನೀಡುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
Kannada BSI Bible 2016
ಆತನು ನನ್ನ ಶತ್ರುಗಳಿಂದ ನನ್ನನ್ನು ಹೊರಗೆ ತರು ತ್ತಾನೆ. ನೀನು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀ; ಬಲಾತ್ಕಾರದ ಮನುಷ್ಯನಿಂದ ತಪ್ಪಿ ಸುತ್ತೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುಗಳಿಂದ ನನ್ನನ್ನು ಬಿಡುಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಗೆ ತಪ್ಪಿಸಿ ಉನ್ನತಪಡಿಸುತ್ತೀ; ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತೀ.
Kannada Bible (KNCL) BSI 2016
ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.