2 Samuel 22:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನ ಮೂಗಿನ ಹೊಳ್ಳೆಗಳಿಂದ ಹೊಗೆಯು ಹೊರಬಂದಿತು. ಬೆಂಕಿಕಿಡಿಯ ಜ್ವಾಲೆಗಳು ಆತನ ಬಾಯಿಂದ ಹೊರಬಂದವು; ದಹಿಸುವ ಬೆಂಕಿಯು ಆತನ ಬಾಯೊಳಗಿಂದ ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
Kannada BSI Bible 2016
ಆತನ ಮೂಗಿನಿಂದ ಹೊಗೆ ಏರಿತು, ಆತನ ಬಾಯಿಯೊಳಗಿಂದ ಬೆಂಕಿ ಹೊರಟು ದಹಿಸಿತು; ಕೆಂಡಗಳು ಅದರಿಂದ ಉರಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಮೂಗಿನಿಂದ ಹೊಗೆಯು ಬಂತು; ಆತನ ಬಾಯಿಂದ ಅಗ್ನಿಜ್ವಾಲೆಹೊರಟು ಸಿಕ್ಕಿದ್ದೆಲ್ಲವನ್ನೂ ದಹಿಸಿ ಕೆಂಡವನ್ನಾಗಿ ಮಾಡಿತು.
Kannada Bible (KNCL) BSI 2016
ಹೊರಬಂದಿತು ಹೊಗೆ ಆತನ ಮೂಗಿನಿಂದ ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ ಕಾದುಕೆಂಡವಾಯಿತು ಅದಕ್ಕೆದುರಿಗೆ ಸಿಕ್ಕಿದುದೆಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂಗಿನಿಂದ ಹೊಗೆ ಬಂದಂತೆಯೂ, ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇತ್ತು.