2 Samuel 23:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
Kannada BSI Bible 2016
ದಾವೀದನ ಕಡೇ ಮಾತುಗಳು ಇವೇ--ಇಷಯನ ಮಗನಾದ ದಾವೀದನು ನುಡಿ ದನು; ಉನ್ನತವಾಗಿ ಏರಿಸಲ್ಪಟ್ಟ ಪುರುಷನು, ಯಾಕೋಬನ ದೇವರ ಅಭಿಷಕ್ತನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಕಡೇ ಮಾತುಗಳು. ಇಷಯನ ಮಗನಾದ ದಾವೀದನ ನುಡಿಗಳು - ಉನ್ನತಸ್ಥಾನಕ್ಕೆ ಏರಿಸಲ್ಪಟ್ಟವನೂ ಯಾಕೋಬನ ದೇವರಿಂದ ಅಭೀಷೇಕಿಸಲ್ಪಟ್ಟವನೂ ಇಸ್ರಾಯೇಲ್ಯರ ವರಕವಿಯೂ ಆಗಿರುವವನು ಹೇಳಿದ್ದು -
Kannada Bible (KNCL) BSI 2016
ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ: