2 Samuel 23:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.
Kannada BSI Bible 2016
ಇವನು ಎದ್ದು ತನ್ನ ಕೈ ದಣಿದು ಕತ್ತಿಗೆ ಹತ್ತಿಕೊಳ್ಳುವ ವರೆಗೂ ಫಿಲಿಷ್ಟಿಯರನ್ನು ಹೊಡೆದುಬಿಟ್ಟನು. ಆ ದಿನ ಕರ್ತನು ದೊಡ್ಡ ರಕ್ಷಣೆಯನ್ನುಂಟು ಮಾಡಿದನು. ಜನರು ಸುಲು ಕೊಳ್ಳುವದಕ್ಕೆ ಮಾತ್ರ ಅವನ ಹಿಂದೆ ಹಿಂತಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಹೋದನಂತರ ಇವನು ನಿಂತು ಕತ್ತಿ ಹಿಡಿದ ಕೈ ಸೋತು ಮರಗಟ್ಟಿ ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲ್ಯರು ಸುಲುಕೊಳ್ಳುವದಕ್ಕೋಸ್ಕರವೇ ಹಿಂದಿರುಗಿದರು.
Kannada Bible (KNCL) BSI 2016
ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.