2 Samuel 23:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಶಮ್ಮನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಆ ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.
Kannada BSI Bible 2016
ಆದರೆ ಅವನು ಆ ಹೊಲದಲ್ಲಿ ನಿಂತುಕೊಂಡು ಅದನ್ನು ಕಾಪಾಡಿ ಫಿಲಿಷ್ಟಿಯರನ್ನು ಕೊಂದುಬಿಟ್ಟನು. ಹೀಗೆ ಕರ್ತನು ದೊಡ್ಡರಕ್ಷಣೆಯನ್ನುಂಟು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾ ಜಯವನ್ನುಂಟುಮಾಡಿದನು.
Kannada Bible (KNCL) BSI 2016
ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.