2 Samuel 23:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.
Kannada BSI Bible 2016
ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ - ಬೇತ್ಲೆಹೇಮ್ ಊರಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವದಾದರೆ ಎಷ್ಟೋ ಒಳ್ಳೇದು ಅಂದನು.
Kannada Bible (KNCL) BSI 2016
ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.