2 Samuel 23:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.
Kannada BSI Bible 2016
ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನೇ, ಈ ನೀರನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ಜೀವದಾಶೆ ತೊರೆದವರ ರಕ್ತ! ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.
Kannada Bible (KNCL) BSI 2016
“ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.