2 Samuel 23:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
Kannada BSI Bible 2016
ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
Kannada Bible (KNCL) BSI 2016
ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.