2 Samuel 23:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?
Kannada BSI Bible 2016
ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಲ್ಲಿ ಘನವುಳ್ಳವನೂ ನಾಯಕನೂ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.
Kannada Bible (KNCL) BSI 2016
ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.