2 Samuel 23:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
Kannada BSI Bible 2016
ಕಬ್ಜಯೇಲಿನಲ್ಲಿದ್ದ ಪರಾಕ್ರಮಶಾಲಿಯ ಮಗನಾದ ಯೆಹೋಯಾದಾ ವನ ಮಗನಾಗಿರುವ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದ್ದನು. ಅವನು ಸಿಂಹದಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದುಬಿಟ್ಟನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡಿಸಿದನು. ದೃಷ್ಟಾಂತ - ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
Kannada Bible (KNCL) BSI 2016
ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.