2 Samuel 23:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
Kannada BSI Bible 2016
ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಆ ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಆ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
Kannada Bible (KNCL) BSI 2016
ಮತ್ತೊಮ್ಮೆ ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.