2 Samuel 23:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
Kannada BSI Bible 2016
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
Kannada Bible (KNCL) BSI 2016
ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.